* * * * * * HASSAN DISTRICT POLICE

Tuesday, September 12, 2017

PRESS NOTE : 12-09-2017

                            ಪತ್ರಿಕಾ ಪ್ರಕಟಣೆ             ದಿನಾಂಕ: 12-09-2017
ಹೆಂಗಸು ಕಾಣೆ

                   ದಿನಾಂಕ: 02-09-2017 ರಂದು ಬೆಳಿಗ್ಗೆ 10-00 ಗಂಟೆ ಸಮಯದಲ್ಲಿ ಬೇಲೂರು ತಾಲ್ಲೂಕು, ಹಳೇಬೀಡು ಹೋಬಳಿ, ರಾಜಗೆರೆ ಗ್ರಾಮದ ವಾಸಿ ಶ್ರೀ ಶೇಖರ್, ರವರ ಪತ್ನಿ ಶ್ರೀಮತಿ ಲತಾ, ರವರು ಮನೆಯಿಂದ ಹೊರಗೆ ಹೋದವಳು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ, ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀಮತಿ ಲತಾಳ ಪತಿ ಶ್ರೀ ಶೇಖರ್, ರವರು ಕೊಟ್ಟ ದೂರಿನ ಮೇರೆಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹೆಂಗಸಿನ ಚಹರೆ: ಶ್ರೀಮತಿ ಲತಾ ಕೋಂ ಶೇಖರ್, 30 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಕೆಂಪು ಬಣ್ಣ ಸೀರೆ ಮತ್ತು ರವಿಕೆ ಧರಿಸಿರುತ್ತಾರೆ. ಈ ಹೆಂಗಸಿನ ಸುಳಿವು ಸಿಕ್ಕಲ್ಲಿ 08177-273201 ಕ್ಕೆ ಸಂಪರ್ಕಿಸುವುದು.

No comments: