* * * * * * HASSAN DISTRICT POLICE

Saturday, March 17, 2018

PRESS NOTE : 16-03-2018


ಪತ್ರಿಕಾ ಪ್ರಕಟಣೆ               ದಿನಾಂಕ: 16-03-2018.

ಜೂಜಾಡುತ್ತಿದ್ದ ಮೂವರ ಬಂಧನ, ಬಂಧಿತರಿಂದ ಸುಮಾರು 1 ಸಾವಿರ ನಗರು & 2 ಬೈಕ್ಗಳ ವಶ:                                                                                                             
      ದಿನಾಂಕ: 15-03-2018 ರಂದು ರಾತ್ರಿ 11-30 ಗಂಟೆ ಸಮಯದಲ್ಲಿ ಬೇಲೂರು ತಾಲ್ಲೂಕು, ಸೋಂಪುರ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ಹತ್ತಿರ ಅಂದರ್-ಬಾಹರ್ ಜೂಜಾಡುತ್ತಿದ್ದಾರೆಂದು ಶ್ರೀ ಮೂಡ್ಲಿಗಿರಿಗೌಡ, ಎಎಸ್ಐ, ಬೇಲೂರು ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಜೂಜಾಡುತ್ತಿದ್ದವರನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ 1) ಕೃಷ್ಣಯ್ಯ ಬಿನ್ ನಿವರ್ಾಣಯ್ಯ, 46 ವರ್ಷ  2) ವಾಸು ಬಿನ್ ರಾಜು, 32 ವರ್ಷ, 3) ಕರಿಯಯ್ಯ ಬಿನ್ ಚಿಕ್ಕಯ್ಯ, 49 ವರ್ಷ, ಎಲ್ಲರೂ ಸೋಂಪುರ ಗ್ರಾಮ, ಬೇಲೂರು ತಾಲ್ಲೂಕು ಎಂದು ತಿಳಿಸಿದ್ದವರನ್ನು ದಸ್ತಗಿರಿ ಮಾಡಿಕೊಂಡು ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ಸುಮಾರು 1 ಸಾವಿರ ನಗದು & 1) ಕೆಎ-18-ಎಲ್-9239 2) ಕೆಎ-46-ಹೆಚ್-14952 ಬೈಕ್ಗಳನ್ನು ಅಮಾನತ್ತುಪಡಿಸಿಕೊಂಡು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

ಕಾರು ಬೈಕ್ಗೆ ಡಿಕ್ಕಿ, ಬೈಕ್ ಸಾವರ ಸಾವು
     ದಿನಾಂಕ: 15-03-2018 ರಂದು ರಾತ್ರಿ 10-45 ಗಂಟೆ ಸಮಯದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು, ಹಿರೀಸಾವೆ ಹೋಬಳಿ, ಮೇಟೆಕೆರೆ ಗೇಟ್ ವಾಸಿ ಶ್ರೀ ಹೆಚ್.ಎಸ್. ನಾಗೇಶ್, ರವರ ಬಾಬ್ತು ಕೆಎ-13 ಕ್ಯೂ-3621 ರ ಬೈಕ್ನಲ್ಲಿ ಚನ್ನರಾಯಪಟ್ಟಣ ತಾಲ್ಲೂಕು, ಹಿರೀಸಾವೆ ಮೇಟೆಕೆರೆ ವೃತ್ತದ ಶೌಚಾಲಯದ ಮುಂಭಾಗ, ಎನ್ಹೆಚ್-75, ಬಿ.ಎಂ. ರಸ್ತೆಯಲ್ಲಿ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಕೆಎ-13-ಬಿ-9347 ರ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಬೈಕ್ಗೆ ಡಿಕ್ಕಿ ಮಾಡಿದ ಶ್ರೀ ಹೆಚ್.ಎಸ್. ನಾಗೇಶ್ ಬಿನ್  ಶಂಕರ್ಲಿಂಗೇಗೌಡ, 44 ವರ್ಷ, ಪ್ರಜ್ವಲ್ ಡಾಬದ ಮಾಲೀಕರು, ಮೇಟಿಕೆರೆ ಗೇಟ್, ಹಿರೀಸಾವೆ, ಚನ್ನರಾಯಪಟ್ಟಣ ತಾಲ್ಲೂಕು ರವರಿಗೆ ತೀವ್ರ ಸ್ವರೂಪದ ರಕ್ತಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾರೆಂದು ಮೃತರ ತಮ್ಮ ಶ್ರೀ ಹೆಚ್.ಎಸ್. ದಿನೇಶ್, ರವರು ಕೊಟ್ಟ ದೂರಿನ ಮೇರೆಗೆ ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

ಹೆಂಗಸು ಕಾಣೆ
ದಿನಾಂಕ: 08-03-2018 ರಂದು ಬೆಳಿಗ್ಗೆ 6-00 ಗಂಟೆ ಆಲೂರು ತಾಲ್ಲೂಕು, ಕುಂದೂರು ಹೋಬಳಿ, ಧರ್ಮಪುರಿ ಗ್ರಾಮದ ವಾಸಿ ಶ್ರೀ ಮಂಜೇಗೌಡ, ರವರ ಪತ್ನಿ ಶ್ರೀಮತಿ ಅನುಸೂಯ, ರವರು ಮನೆಯಿಂದ ಹೊರಗೆ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀಮತಿ ಅನುಸೂಯಳ ಪತಿ ಶ್ರೀ ಮಂಜೇಗೌಡ, ರವರು ಕೊಟ್ಟ ದೂರಿನ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹೆಂಗಸಿನ ಚಹರೆ: ಶ್ರೀಮತಿ ಅನುಸೂಯ ಕೋಂ ಮಂಜೇಗೌಡ, 34 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣ ಮೈಕಟ್ಟು, ಮನೆಯಿಂದ ಹೋಗುವಾಗ ಹಸಿರು ಬಣ್ಣದ ಸೀರೆ ಮತ್ತು ಹಳದಿ ಬಣ್ಣದ ರವಿಕೆ ಧರಿಸಿರುತ್ತಾಳೆ, ಈ ಹೆಂಗಸಿನ ಸುಳಿವು ಸಿಕ್ಕಲ್ಲಿ 08170-218231 ಕ್ಕೆ ಸಂಪರ್ಕಿಸುವುದು.

ಹುಡುಗಿ ಕಾಣೆ
ದಿನಾಂಕ: 12-03-2018 ರಂದು ಬೆಳಿಗ್ಗೆ 5-00 ಗಂಟೆ ಸಮಯದಲ್ಲಿ ಹೊಳೆನರಸೀಪುರ ತಾಲ್ಲೂಕು, ಹಳ್ಳಿಮೈಸೂರು ಹೋಬಳೀ, ಆನೆಕನ್ನಾಂಬಾಡಿ ಗ್ರಾಮದ ವಾಸಿ ಶ್ರೀ ಸಣ್ಣಯ್ಯ, ರವರ ಮಗಳು ಕು|| ವರಲಕ್ಷ್ಮೀ, ಮೂತ್ರ ವಿಸರ್ಜನೆಗೆಂದು ಹೊರಗೆ ಹೋದವಳು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾಳೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಕು|| ವರಲಕ್ಷ್ಮೀಯ ತಂದೆ ಶ್ರೀ ಸಣ್ಣಯ್ಯ, ರವರು ಕೊಟ್ಟ ದೂರಿನ ಮೇರೆಗೆ ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗಿಯ ಚಹರೆ: ಕು|| ಲಕ್ಷ್ಮೀ ಬಿನ್ ಸಣ್ಣಯ್ಯ, 4 ಳಿ'' ಅಡಿ ಎತ್ತರ, 18 ವರ್ಷ, ಎಣ್ಣೆಗೆಂಪು ಬಣ್ಣ, ದುಂಡುಮುಖ, ಸಾಧಾರಣ ಮೈಕಟ್ಟು,  ಕನ್ನಡ ಭಾಷೆ ಮಾತನಾಡುತ್ತಾಳೆ, ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಚೂಡಿದಾರ ಧರಿಸಿರುತ್ತಾಳೆ. ಈ ಹುಡುಗಿಯ ಸುಳಿವು ಸಿಕ್ಕಲ್ಲಿ 08175-260100 ಕ್ಕೆ ಸಂಪರ್ಕಿಸುವುದು.
ಗಂಡಸು ಕಾಣೆ
ದಿನಾಂಕ: 09-03-2018 ರಂದು ಬೆಳಿಗ್ಗೆ 7-00 ಗಂಟೆ ಸಮಯದಲ್ಲಿ ಹಾಸನ ತಾಲ್ಲೂಕು, ಶಾಂತಿಗ್ರಾಮ ಹೋಬಳಿ, ಎ ಗುಡುಗನಹಳ್ಳಿ ಗ್ರಾಮದ ವಾಸಿ ಶ್ರೀ ದೇವರಾಜ, ರವರು ಹಾಸನಕ್ಕೆ ಹೋಗುತ್ತೇನೆಂದು ಮನೆಯಲ್ಲಿ ಹೇಳಿಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀ ದೇವರಾಜನ ಪತ್ನಿ ಶ್ರೀಮತಿ ಭವಾನಿ, ರವರು ಕೊಟ್ಟ ದೂರಿನ ಮೇರೆಗೆ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಗಂಡಸಿ ಚಹರೆ: ಶ್ರೀ ದೇವರಾಜ, 38 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿರುತ್ತಾರೆ. ಈ ವ್ಯಕ್ತಿಯ ಸುಳಿವು ಸಿಕ್ಕಲ್ಲಿ 08172-258038 ಕ್ಕೆ ಸಂಪರ್ಕಿಸುವುದು.

No comments: